Ad Widget .

ಕುರಿ ಮಾಂಸ ಬದಲು ನಾಯಿ ಮಾಂಸ ಸರಬರಾಜು ಆರೋಪ| ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ಶಿಪ್ಟ್

ಸಮಗ್ರ ನ್ಯೂಸ್: ಹೊರ ರಾಜ್ಯದಿಂದ ರೈಲಿನಲ್ಲಿ ಪ್ರತಿದಿನ ಸಾವಿರಾರು ಕೆಜಿ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಇದನ್ನು ನಗರದಲ್ಲಿರುವ ಬಹುತೇಕ ಹೋಟೆಲ್​ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಲ ತಿಂಗಳ ಹಿಂದೆ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್, ಸಾಕ್ಷಿ ಸಮೇತ ಬಿಬಿಎಂಪಿ, ಪೊಲೀಸರಿಗೆ ಮತ್ತು ಆರೋಗ್ಯ ಇಲಾಖೆಗೆ ದೂರು ಸಲ್ಲಿಸಿದ್ದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಸಂಬಂಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಶುಕ್ರವಾರ (ಜೂನ್ 26) ಸಂಜೆ ಹಿಂದೂ ಸಂಘಟನೆಯ ಕಾರ್ಯರ್ತರು ಪುನೀತ್​ ಕೆರೆಹಳ್ಳಿ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ನಡೆಸಿ ಮಾಂಸ ತುಂಬಿದ್ದ ಚೀಲಗಳನ್ನು ತೆಗೆದು ಆಕ್ರೋಶ ಹೊರಹಾಕಿದರು. ಇದೇ ವೇಳೆ ಸ್ಥಳಕ್ಕಾಗಮಿಸಿದ ಮುಸ್ಲಿಂ ಮುಖಂಡ ಅಬ್ದುಲ್​ ರಜಾಕ್​ ಇದು ನಾಯಿ ಮಾಂಸವಲ್ಲ, ಕುರಿ ಮಾಂಸ ಎಂದು ಹೇಳಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಮಾಂಸದ ಚೀಲಗಳು ಹಾಗೂ ಕೆಲವರನ್ನು ವಶಕ್ಕೆ ಪಡೆಯಲಾಗಿದೆ.

Ad Widget . Ad Widget . Ad Widget .

ಈ ಕುರಿತು ಮಾತನಾಡಿರುವ ಮುಸ್ಲಿಂ ಮುಖಂಡ ಅಬ್ದುಲ್​ ರಜಾಕ್​, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್​ಕಾಲ್​ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್​ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಜೈಪುರಿಂದ ಬಂದ ಮಾಂಸದ ಬಗ್ಗೆ ವಾಗ್ದಾದ ನಡೆದಿರುವ ಮಧ್ಯ ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಯಾಗಿ ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ಓಪನ್ ಮಾಡಿ ಪರಿಶೀಲನೆ ಮಾಡಿದ್ದಾರೆ. ಗುಣಮಟ್ಡ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದಿಡಿದ್ದಾರೆ. ಇದೇ ವೇಳೆ ಪುನೀತ್​ ಕೆರೆಹಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Comment

Your email address will not be published. Required fields are marked *