Ad Widget .

ಉಪ್ಪಿನಂಗಡಿ: ತುಂಬಿ ಹರಿಯುತ್ತಿದ್ದ ನೇತ್ರಾವತಿಯಲ್ಲಿ ಕೊಚ್ಚಿ ಬಂದ ದನ| ಗೋವನ್ನು ರಕ್ಷಣೆ ಮಾಡಿದ ವಿಕೋಪ ತಂಡ

ಸಮಗ್ರ ನ್ಯೂಸ್: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದ ಸಿಬ್ಬಂದಿಗಳು ಹಾಗೂ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಭಸದಿಂದ ಹರಿಯುತ್ತಿದ್ದ ಈ ನದಿಯು ಮಧ್ಯದಲ್ಲಿ ದನವೊಂದು ತೇಲಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಹಳೆಗೇಟು ಸಮೀಪದ ದಡ್ಡು ಎಂಬಲ್ಲಿರುವ ಟಯರ್ ಅಂಗಡಿಯ ಮಾಲಕ ಚಂದಪ್ಪ ಅವರು ಕೂಡಲೇ ಪ್ರವಾಹ ರಕ್ಷಣಾ ತಂಡಕ್ಕೆ ತಿಳಿಸಿದ್ದಾರೆ.

Ad Widget . Ad Widget . Ad Widget .

ಕೂಡಲೇ ಸ್ಥಳಕ್ಕಾಗಮಿಸಿದ ತಂಡ ತಮ್ಮಲ್ಲಿರುವ ರಬ್ಬರ್ ದೋಣಿಯ ಮೂಲಕ ತೆರಳಿ ದನದ ಮೂಗುದಾರಕ್ಕೆ ಹಗ್ಗವನ್ನು ಕಟ್ಟಿ ದಡಕ್ಕೆ ಕರೆತಂದು ಕಟ್ಟಿ ಹಾಕಿದರು. ಗೃಹ ರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ. ಅವರ ನೇತೃತ್ವದ ಈ ರಕ್ಷಣಾ ಕಾರ್ಯಾಚರಣ ತಂಡದಲ್ಲಿ ಎ.ಎಸ್.ಎಲ್. ಜನಾರ್ದನ, ಚರಣ್, ಸುದರ್ಶನ್, ಹಾರೀಸ್, ಸಮದ್ ಭಾಗವಹಿಸಿದ್ದರು. ಇನ್ನು ನದಿ ಮಧ್ಯದಿಂದ ದನವನ್ನು ರಕ್ಷಿಸಿ ದಡಕ್ಕೆ ಕರೆ ತಂದ ಪ್ರವಾಹ ರಕ್ಷಣಾ ತಂಡದ ಸಾಹಸಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *