ಪೊನ್ನಂಪೇಟೆ: ಮೇಯಲು ಬಿಟ್ಟಿದ್ದ 6 ಹಸುಗಳು ವಿದ್ಯುತ್ ತಂತಿ ಸ್ಪರ್ಶಿಸಿ ಸಾವು

ಸಮಗ್ರ ನ್ಯೂಸ್: ಮೇಯಲು ಬಿಟ್ಟಿದ್ದ 6 ಹಸುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಡಗು‌ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಬೊಜ್ಜಂಗಡ ನಟರಾಜ್ ಎಂಬವರ ಹಸುಗಳು ಸಾವನ್ನಪ್ಪಿದ್ದು, ಹೈನುಗಾರಿಕೆಯೊಂದಿಗೆ ಬದುಕು ಕಟ್ಟಿಕೊಂಡಿದ್ದ ಕುಟುಂಬ ಕಂಗಾಲಾಗಿದೆ.

Ad Widget ... ..

ತೆರಾಲು ಗ್ರಾಮದಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದ್ದು, ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದೆ. ಹಸುಗಳು ಬರುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *