ಚಿಕ್ಕಮಗಳೂರು ಜಿಲ್ಲೆಯಲ್ಲಿ ‌ರೆಡ್ ಅಲರ್ಟ್ ‌ಹಿನ್ನಲೆ| ಜು.31ರಂದು ಜಿಲ್ಲೆಯ 6 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಧಾರಾಕಾರ ಮ‌ಳೆ‌ ಹಿನ್ನೆಲೆಯಲ್ಲಿ ನಾಳೆ ಮಲೆನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Ad Widget ... ..

ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಲೆನಾಡು ಭಾಗದ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗಳಿಗೆ ಜು.31ರಂದು ರಜೆ ಘೋಷಣೆ ಮಾಡಲಾಗಿದೆ.

Ad Widget

ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ‌‌ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ‌ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ನೀಡಿ ಆದೇಶಿಸಿದ್ದಾರೆ. ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇರುವುದಿಲ್ಲ.

Leave a Comment

Your email address will not be published. Required fields are marked *