Ad Widget .

ರೆಡ್ ಅಲರ್ಟ್ ಹಿನ್ನೆಲೆ| ಉತ್ತರ ಕನ್ನಡ ಜಿಲ್ಲೆಯ ಏಳು ತಾಲೂಕಿನ ಶಾಲೆ- ಕಾಲೇಜುಗಳಿಗೆ ಆ.2ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಧಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ದಿಪ್ಲೋಮಾ ಕಾಲೇಜುಗಳಿಗೆ ದಿನಾಂಕ: 02-08-2024 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಮಾಡಿರುತ್ತಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೋನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನಾದ್ಯಂತ, ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ,ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಮುಂಜಾಗೃತ ಕ್ರಮವಾಗಿ ದಿನಾಂಕ: 02-08-2024 ರಂದು ರಜೆ ನೀಡಲಾಗಿದೆ.

Ad Widget . Ad Widget . Ad Widget .

ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ ಕಾರವಾರ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಎಂದೂ ತಿಳಿಸಲಾಗಿದೆ.

Leave a Comment

Your email address will not be published. Required fields are marked *