ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯಲ್ಲಿ ಕಳೆದ ಜೂನ್ ತಿಂಗಳಿನಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿರಲಿಲ್ಲ ಆದರೆ ಇದೀಗ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಜುಲೈ ತಿಂಗಳ ಗೃಹಲಕ್ಷ್ಮೀ ಹಣವನ್ನು ಇಂದೇ ಬಿಡುಗಡೆ ಮಾಡುತ್ತೇವೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಇಂದಿನಿಂದ (ಆ.08) ಹಣ ಜಮಾವಣೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದರು.
ಇತ್ತ ಜೂನ್ ಮತ್ತು ಜುಲೈ ತಿಂಗಳ ಹಣ ಜಮೆಯಾಗದಿದ್ದಕ್ಕೆ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಹಿಳೆಯರು ಇನ್ಮುಂದೆ ನಮಗೆ ಹಣ ಬರತ್ತೋ ಇಲ್ವೋ ಅಂತ ಚಿಂತಿತರಾಗಿದ್ದರು. ಆದರೆ ಇದೀಗ, ವರಮಹಾಲಕ್ಷ್ಮಿ ಪ್ರಯುಕ್ತ ಹಣ ಜಮೆ ಆಗಲಿದೆ.







