ಕಡಬ: ಅಪ್ರಾಪ್ತೆಯ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಕಡಬ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ad Widget ... ..

ಕಡಬ ತಾಲೂಕಿನ ಮರ್ಧಾಳ ಸಮೀಪದ ನಿವಾಸಿಗಳಾದ ನಂದನ್‌ ಹಾಗೂ ಮಾಹಿಝ್ ಬಂಧಿತ ಆರೋಪಿಗಳು. ಆರೋಪಿಗಳನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದಿದ್ದ ಪೊಲೀಸರು, ಪ್ರತ್ಯೇಕ 2 ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಮಂಗಳವಾರ ಸ್ಥಳ ಮಹಜರು ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ad Widget

Leave a Comment

Your email address will not be published. Required fields are marked *