ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ

ಸಮಗ್ರ ನ್ಯೂಸ್: ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ.

Ad Widget ... ..

ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ.

Ad Widget

ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ- ಕಡಗರವಳ್ಳಿ ನಡುವಿನಲ್ಲಿ ಉಂಟಾಗಿರುವ ಭೂಕುಸಿತದಿಂದ ಹಾನಿಗೊಂಡಿರುವ ರೈಲು ಮಾರ್ಗದ ದುರಸ್ತಿ ಕಾರ್ಯ ಮುಂದುವರಿದಿದೆ.

ಈಗಾಗಲೇ ರೈಲು ಮಾರ್ಗದ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿವೆ.

Leave a Comment

Your email address will not be published. Required fields are marked *