ನಿರ್ಮಾಣ ಹಂತದ ಕಟ್ಟಡ ಕುಸಿತ : ಇಬ್ಬರು ಸಾವು ಓರ್ವ ಗಂಭೀರ

ಸಮಗ್ರ ನ್ಯೂಸ್: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಪೀಣ್ಯದ ಎನ್ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28), ಆಸ್ಪತ್ರೆಗೆ ಸಾಗಿಸುವಾಗ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Ad Widget ... ..

ಕಾರ್ಮಿಕರು ಏಷಿಯನ್ ಪೈಂಟ್ಸ್ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಕಟ್ಟಡದ ನಾಲ್ಕನೇ ಮಹಡಿಗೆ ಕಾಂಕ್ರೀಟ್ ಹಾಕುತ್ತಿದ್ದಾಗ, ಏಕಾಏಕಿ ಸೆಂಟ್ರಿಂಗ್ ಕುಸಿದು ಬಿದ್ದಿದೆ. ಮೇಲ್ಭಾಗದಲ್ಲಿದ್ದ ಮೂವರು ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮತ್ತೊರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

Ad Widget

Leave a Comment

Your email address will not be published. Required fields are marked *