ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಕ್ಯಾಂಟರ್ – ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಮೂವರು ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಯಾದಗಿರಿ ಮೂಲದ ಕಟ್ಟಡ ಕಾರ್ಮಿಕಾರದ ನರಸಪ್ಪ(35), ಹುಸೇನಪ್ಪ(34), ಪಾದಚಾರಿ ತುಮಕೂರು ತಾಲೂಕಿನ ಸೀತಕಲ್ಲು ನಿವಾಸಿ ಶಿವಗಂಗಪ್ಪ(55) ಮೃತರು. ಐವರ ಸ್ಥಿತಿ ಚಿಂತಾಜನಕವಾಗಿದೆ.
ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು.






