ಸಮಗ್ರ ನ್ಯೂಸ್: ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಆರೋಪ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಿಂದ ವರದಿಯಾಗಿದೆ.
ಗರ್ಭಿಣಿಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ಈ ಪೊಟ್ಟಣಗಳನ್ನು ವಿತರಿಸಲಾಗಿತ್ತು. ಗರುಡಾಚಾರ್ಲಹಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬುವರಿಗೆ ನೀಡಿದ ಎರಡು ಬೆಲ್ಲದ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಸತ್ತ ಇಲಿ ಕಂಡುಬಂದಿವೆ. ಕೂಡಲೇ ಅವರು ಪೊಟ್ಟಣಗಳನ್ನು ಅಂಗನವಾಡಿ ಕಾರ್ಯಕರ್ತೆ ಗಮನಕ್ಕೆ ತಂದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ ಈ ಪೌಷ್ಟಿಕ ಆಹಾರ ಪೊಟ್ಟಣಗಳು ಬಾಗೇಪಲ್ಲಿ ತಾಲ್ಲೂಕು ಯಲ್ಲಂಪಲ್ಲಿ ಎಂ.ಎಸ್.ಪಿ.ಎಸ್ ಸಂಸ್ಥೆಯಲ್ಲಿ ತಯಾರಾಗುತ್ತಿವೆ. ತಯಾರಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ ಆಗಿದೆ. ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿರುವವರ ಮೇಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಮನವಿ ಮಾಡಿದ್ದಾರೆ.