ಸಮಗ್ರ ನ್ಯೂಸ್: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಮಂಗಳೂರು ಠಾಣೆಯ ಪೊಲೀಸರು.
ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್ ಕಾರ್ಡ್‌ಗಳು, 2 ಮೊಬೈಲ್ ಫೊನ್‌ಗಳು ಮತ್ತು ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ (26) ಮತ್ತು ಮಹಮ್ಮದ್ ಅಜೀಂ (19) ಶಮದ್ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದರು. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್ನ ಸಾಜೀದ್ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್ ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.
ಆರೋಪಿಗಳು ಕಳೆದ ಜನವರಿಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400ರಿಂದ 500 ಸಿಮ್ ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್ಗೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.