ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ| ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ

ಸಮಗ್ರ ನ್ಯೂಸ್: ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು (ಆ.16) ಮುಂಜಾನೆ ನಡೆದಿದೆ.

Ad Widget ... ..

ಅಪಘಾತದಲ್ಲಿ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ‌ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

Ad Widget

ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಪಘಾತಕ್ಕೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

Leave a Comment

Your email address will not be published. Required fields are marked *