ವಿದ್ಯುತ್ ಶಾಕ್ ಗೆ ಇಂಜಿನಿಯರ್ ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್‍ನಿಂದ ಯುವ ಇಂಜಿನಿಯರ್ ಸಾವಿಗೀಡಾದ ಘಟನೆ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ನಿವಾಸಿ ಕೌಶಿಕ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

Ad Widget ... ..

ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ವಿದ್ಯುತ್ ತಗಲಿದೆ. ಕೂಡಲೆ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ಅವರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇರಲಿಲ್ಲ. ಹೀಗಾಗಿ ಕಾರ್ತಿಕ್ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಕಂಪನಿಯಿಂದ ಕೈಗೆ ಗ್ಲೌಸ್ ಸಹ ನೀಡದೆ ನಿರ್ಲಕ್ಷ ತೋರಿದೆ. ಇದರಿಂದ ಮಗನನ್ನು ಕಳೆದುಕೊಂಡಿದ್ದೇವೆ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ.

Leave a Comment

Your email address will not be published. Required fields are marked *