Ad Widget .

SBI, PNB ಬ್ಯಾಂಕ್ ಖಾತೆಗಳನ್ನು ಮುಚ್ಚಲು ಕಾಂಗ್ರೆಸ್ ಸರ್ಕಾರ ನಿರ್ಧಾರ ಅಚ್ಚರಿಪಡಿಸಿದೆ; ಲಹರ್ ಸಿಂಗ್ ಸಿರೋಯಾ

ಸಮಗ್ರ ನ್ಯೂಸ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾತೆಗಳನ್ನು ಮುಚ್ಚಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದೆ. ರಾಜ್ಯ ಸರ್ಕಾರದ ನಿರ್ಧಾರ ನಿರಂಕುಶ ಮನಸ್ಥಿತಿ ಮತ್ತು ಅನುಮಾನಾಸ್ಪದವಾಗಿದೆ. ಈ ಕುರಿತು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಗಮನ ಹರಿಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

ಈ ಕುರಿತು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು. ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ಗಳಲ್ಲಿ ಖಾತೆಗಳನ್ನು ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರ ಅನುಮಾನಾಸ್ಪದವಾಗಿದೆ. ದೇಶದ ಆರ್ಥಿಕ ವ್ಯವಸ್ಥೆಯ ಬಗ್ಗೆ ಅನುಮಾನ ಹುಟ್ಟುವಂತೆ ಹೇಳಿಕೆ ನೀಡುತ್ತಿರುವ ರಾಹುಲ್ ಗಾಂಧಿಯವರ ಇತ್ತೀಚಿನ ಹೇಳಿಕೆಗೂ ಕರ್ನಾಟಕ ಸರ್ಕಾರದ ಈ ಕ್ರಮಕ್ಕೂ ಸಂಬಂಧ ಇದೆ ಎಂಬ ಅನುಮಾನ ಈಗ ಉಂಟಾಗಿದೆ. ಹೀಗಾಗಿ ಇತ್ತ ಗಮನಹರಿಸಿ ಎಂದು ನಾನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

Ad Widget . Ad Widget .

ಎರಡು ರಾಷ್ಟ್ರೀಕೃತ ಬ್ಯಾಂಕ್ ಗಳ ವಿರುದ್ಧ ರಾಜ್ಯ ಸರ್ಕಾರ ಹೀಗೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಬಹುದೇ, ಎಲ್ಲಾ ಬ್ಯಾಂಕುಗಳು RBI ನಿಯಮಗಳು ಮತ್ತು ನಿಬಂಧನೆಗಳಿಂದ ನಿಯಂತ್ರಿಸಲ್ಪಡುತ್ತದೆ. ರಾಜ್ಯ ಸರ್ಕಾರಕ್ಕೆ ಬ್ಯಾಂಕುಗಳೊಂದಿಗೆ ಸಮಸ್ಯೆಗಳಿದ್ದರೆ RBI ಬಳಿ ಚರ್ಚಿಸಬಹುದಿತ್ತು. ಕೆಲವು ರಾಷ್ಟ್ರೀಕೃತ ಬ್ಯಾಂಕ್ಗಳೊಂದಿಗೆ ಮಾತ್ರ ವ್ಯವಹಾರ ಮಾಡಬಹುದು ಮತ್ತು ಕೆಲವು ಬ್ಯಾಂಕ್ ಗಳ ಜೊತೆ ವ್ಯವಹಾರ ಮಾಡಬಾರದು ಎಂದಿದೆಯೇ? ರಾಜ್ಯ ಸರ್ಕಾರ ಹೇಳುತ್ತಿರುವ ಹಣ ದುರ್ಬಳಕೆಯ ಸ್ವರೂಪವೇನು?, ಇದರ ತನಿಖೆಯಾಗಿದೆಯೇ?. ಕರ್ನಾಟಕ ಸರ್ಕಾರದಲ್ಲಿ ನಿಜವಾಗಿಯೂ ಏನು ನಡೆಯುತ್ತಿದೆ. ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಅನುಮಾನ ಮೂಡಿಸಲು ಪ್ರಯತ್ನಿಸುತ್ತಿದೆಯೇ ಎಂದು ಅಚ್ಚರಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Leave a Comment

Your email address will not be published. Required fields are marked *