ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ/ ರಾಜ್ಯಾದ್ಯಂತ ಹೈ ಆಲರ್ಟ್‌

ಸಮಗ್ರ ನ್ಯೂಸ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದ್ದು ಈ ಹಿನ್ನೆಲೆಯಲ್ಲಿ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಂಘಟನೆಗಳು, ಸಿದ್ದರಾಮಯ್ಯ ಅಭಿಮಾನಿಗಳ ಸಂಘಗಳು ಇಂದು ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

Ad Widget ... ..

ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು, ಅಶಾಂತಿಯ ವಾತಾವರಣ ಸೃಷ್ಟಿಸಬಹುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದು. ಈ ನಿಟ್ಟಿನಲ್ಲಿ ಬಹಳ ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಹೇಳಿದರು.

Ad Widget

Leave a Comment

Your email address will not be published. Required fields are marked *