ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಬೇಕಿರುವಂತ ಅಕ್ಕಿ ಕೊಡುತ್ತಿಲ್ಲ ಎನ್ನುವ ಕಾರಣಕ್ಕಾಗಿ ಪಡಿತರ ಚೀಟಿದಾರರಿಗೆ ಅಕ್ಕಿ ಬದಲಾಗಿ ಹಣವನ್ನೇ ನೀಡಲಾಗುತ್ತಿತ್ತು. ಆದರೇ ಈಗ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವಂತ ಅಕ್ಕಿ ನೀಡಲು ಮುಂದಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅನ್ನ ಭಾಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಅಗತ್ಯವಾದ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.
ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರ ಆದೇಶ ನೀಡಿದ ಕೂಡಲೇ ಕೇಂದ್ರವು ಅಗತ್ಯ ಪ್ರಮಾಣದ ಅಕ್ಕಿಯನ್ನು ಒದಗಿಸುತ್ತದೆ ಎಂದು ದೃಢಪಡಿಸಿದ್ದಾರೆ.
ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್‌ಎಸ್) ಅಡಿಯಲ್ಲಿ ಅಕ್ಕಿಯನ್ನು ಪೂರೈಸುವ ಇಚ್ಛೆಯನ್ನು ಕೇಂದ್ರ ವ್ಯಕ್ತಪಡಿಸಿದೆ.