ಸಮಗ್ರ ನ್ಯೂಸ್: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯಿಸಿದೆ.
ʼನೀವು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಾನೂನು ರೀತಿಯಲ್ಲಿ ಹಸ್ತಾಂತರಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ದೇಶದ ಜನರು ಅವರ ವಿಚಾರಣೆಗೆ ಕಾದಿದ್ದಾರೆ. ಆಕೆ ಆ ವಿಚಾರಣೆಯನ್ನು ಎದುರಿಸಲಿ’ ಎಂದು BNP ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಹೇಳಿದ್ದಾರೆ.
ಶೇಖ್ ಹಸೀನಾ ಬಾಂಗ್ಲಾದೇಶದಲ್ಲಿ 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಶೇಖ್ ಹಸೀನಾಗೆ ಆಶ್ರಯ ನೀಡುವ ಮೂಲಕ ಭಾರತವು ಪ್ರಜಾಪ್ರಭುತ್ವದ ಬಗ್ಗೆ ತನ್ನ ಬದ್ಧತೆಯನ್ನು ತೋರುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ. ಭಾರತದಲ್ಲಿಯೇ ಉಳಿದುಕೊಂಡು ಬಾಂಗ್ಲಾದೇಶದಲ್ಲಿ ಸಂಭವಿಸಿದ ಕ್ರಾಂತಿಯನ್ನು ತಡೆಯಲು ಶೇಖ್ ಹಸೀನಾ ನಾನಾ ಕುತಂತ್ರಗಳನ್ನು ಆರಂಭಿಸಿದ್ದಾರೆ ಎಂದು ಮಿರ್ಜಾ ಫಕ್ರುಲ್ ಆರೋಪಿಸಿದ್ದಾರೆ.