ಮಂಗಳೂರು: ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ತಡರಾತ್ರಿ ಕಲ್ಲು ತೂರಾಟ‌

ಸಮಗ್ರ ನ್ಯೂಸ್: ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

Ad Widget ... ..

ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

ಐವನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬಂದೊದಗಲಿದೆ ಎಂದು ಹೇಳಿದ್ದರು.

Leave a Comment

Your email address will not be published. Required fields are marked *