ಸಂಪಾಜೆ: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು| ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಸಾವು

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಕೆವಿಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Ad Widget ... ..

ವಿರಾಜಪೇಟೆಯ 64 ವರ್ಷ ಪ್ರಾಯದ ಗಣೇಶ್ ಎಂಬವರು ಮೃತಪಟ್ಟ ದುರ್ದೈವಿ. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಗಣೇಶ್ ರವರಿಗೆ ಎದೆಗೆ ಗಂಭೀರ ಗಾಯಗಳಾಯಿತು.

Ad Widget

ಕೂಡಲೇ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಮಗಳು ಅಳಿಯ ಮತ್ತು ಇನ್ನೋರ್ವ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *