ಸಮಗ್ರ ನ್ಯೂಸ್: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಮೂರು ದಿನ ನ್ಯಾಯಾಂಗ ಬಂಧನಲ್ಲಿದ್ದರು. ಇಂದು (ಆ.27) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಐದು ದಿನಗಳವರೆಗೆ (ಆ. 31 ರವರೆಗೆ) ಹೆಚ್ಚಿನ ತನಿಖೆಗಾಗಿ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿ ಅಳಿಯ ರಾಘವೇಂದ್ರ ಕೆಧಿಲಾಯ(53) ಮತ್ತು ಮೊಮ್ಮಗ ಮುರಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಿದ್ದರು.
ಆ.27 ರಂದು ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಕರಣದ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ಹಾಜರುಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಏಳು ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ಕೇಳಿದ್ದು ನ್ಯಾಯಾಧೀಶರು ಐದು ದಿನ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.