ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ| ಅತೀ ಕಿರಿಯ ವಯಸ್ಸಿನಲ್ಲೇ ಮಹತ್ವದ ಹುದ್ದೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 27) ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

Ad Widget ... ..

ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದ್ದು, ಇದಾದ ಬಳಿಕ ಜಯ್ ಶಾ ವಿಶ್ವ ಕ್ರಿಕೆಟ್ ಮಂಡಳಿಯ ಗದ್ದುಗೆ ಏರಲಿದ್ದಾರೆ. ಅದರಂತೆ ಡಿಸೆಂಬರ್ 1 ರಿಂದ ಜಯ್ ಶಾ ಕಾರ್ಯಾರಂಭ ಮಾಡಲಿದ್ದಾರೆ.

Ad Widget

ಇದಕ್ಕೂ ಮುನ್ನ ಗ್ರೆಗ್ ಬಾರ್ಕ್ಲೇ ಅವರು 2020 ರಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ 2022ರಲ್ಲಿ ಅವರು ಮರು ಚುನಾಯಿತರಾಗಿದ್ದರು. ಇದೀಗ ಅವರ ಕಾರ್ಯಾವಧಿ ಮುಗಿಯುತ್ತಿದ್ದು, ಹೀಗಾಗಿ ಈ ಬಾರಿ ಚುನಾವಣೆ ಘೋಷಿಸಲಾಗಿತ್ತು. ಆದರೀಗ ಅಧ್ಯಕ್ಷ ಹುದ್ದೆಗೆ ಜಯ್ ಶಾ ಅವರ ಹೆಸರು ಮಾತ್ರ ನಾಮನಿರ್ದೇಶನಗೊಂಡಿದ್ದು, ಅದರಂತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Leave a Comment

Your email address will not be published. Required fields are marked *