ಸಮಗ್ರ ನ್ಯೂಸ್: ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ನವ್ಯಾ (25) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಪತಿ ಕಿರಣ್ ಕೊಲೆಗೈದ ಆರೋಪಿ.
ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಪತ್ನಿಯ ಶೀಲ ಶಂಕಿಸಿ, ಆಕೆಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ನೀಡಿ, ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಕೆಂಗೇರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಲೆಗೈದ ಆರೋಪಿ ಕಿರಣ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ