ಓಮಾನ್ ನಲ್ಲಿ ಭೀಕರ ಅಪಘಾತ| ಬೆಳಗಾವಿಯ ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ಓಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ. ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದ್ದು ಘಟನೆಯಲ್ಲಿ ಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Ad Widget ... ..

ಈ ಕುಟುಂಬ ದುಬೈನ ಓಮಾನ್ಗೆ ಪ್ರವಾಸಕ್ಕೆ ತೆರಳಿತ್ತು. ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

Ad Widget

Leave a Comment

Your email address will not be published. Required fields are marked *