ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಬಳಸಿದಕ್ಕೆ ಸಚಿವ ಈಶ್ವರಪ್ಪ “ನಾನು ಆ ಪದ ಬಳಸಬಾರದಿತ್ತು, ಆದರೆ ಬಳಸಿದ್ದೇಕ್ಕೆ ಕ್ಷಮೆಯನ್ನು ಯಾಚಿಸಿದ್ದೇನೆ” ಎಂದು ಕ್ಷಮೆಯಸಿದ್ದಾರೆ.
ಕಾಂಗ್ರೆಸ್‍ನವರ ವಿರುದ್ಧ ಅಶ್ಲೀಲ ಶಬ್ದ ಬಳಸಿದ ವಿಚಾರವಾಗಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾನು ಹೇಳಿದ್ದು ಹೌದು, ಆ ಒಂದು ಪದ ಬಳಸಿದ್ದು ತಪ್ಪು. ಸಿಟ್ಟಿನ ಭರದಲ್ಲಿ ಹೇಳಿ ಆ ಪದವನ್ನು ಹಿಂಪಡೆದುಕೊಂಡಿದ್ದೇನೆ. ಆದರೆ ಸುಲಭ್ ಶೌಚಾಲಯಕ್ಕೆ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಹೇಳಿದನ್ನು ಕಾಂಗ್ರೆಸ್ ಅವರು ಒಪ್ಪುತ್ತಾರಾ? ಕಾಂಗ್ರೆಸ್ ಅವರು ರಾಜಕಾರಣ ಮಾಡಲು ಕಾಯುತ್ತಿದ್ದಾರೆ ಎಂದು ತಿರುಗೇಟು ಕೊಟ್ಟಿದ್ದಾರೆ.
ಅವಾಚ್ಯ ಪದ ಬಳಕೆಗೆ ಕ್ಷಮೆ ಯಾಚಿಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ಬಾರಿ ಆಯಿತಲ್ಲ. ಬೆಳಗ್ಗೆಯಿಂದ ಸಂಜೆಯವರೆಗೂ ಅದೇ ಮಾಡಬೇಕಾ ಎಂದು ಮರು ಪ್ರಶ್ನೆ ಕೇಳಿದರು.
ನೆರೆ ಪೀಡಿತ ಬೆಳಗಾವಿ ಜಿಲ್ಲೆಗೆ ಇನ್ನೂ ಹಣ ಬಿಡುಗಡೆ ಮಾಡದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಷ್ಟೇ ಸರ್ಕಾರ ಬಂದಿದೆ. ಬರುತ್ತಿದ್ದ ಹಾಗೇ ನೆರೆಹಾನಿ, ಕೊರೊನಾ ಎಂಬ ಸಂಕಟಗಳು ಎದುರಾಗಿವೆ. ಈ ಬಗ್ಗೆ ಇನ್ನೂ ವರದಿ ಬಂದಿಲ್ಲ. ವರದಿ ಬಂದ ಮೇಲೆ ಎಷ್ಟು ನಷ್ಟವಾಗಿದೆ ಎಂದು ನೋಡಿ ಖಂಡಿತ ಹಣ ಬಿಡುಗಡೆ ಮಾಡುತ್ತೇವೆ. ಎಂದಿದ್ದಾರೆ.