Ad Widget .

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ; ಯುವಕ ಸಾವು

ಸಮಗ್ರ ನ್ಯೂಸ್: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ಸೆಪ್ಟೆಂಬರ್ 1 ರಂದು ನಡೆದಿದೆ. ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಮೃತ ದುರ್ದೈವಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ
ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

Ad Widget . Ad Widget . Ad Widget .

ಪ್ರದೀಪ್ ಪಡುಪೆರಾರ ಗ್ರಾಮ ಪಂಚಾಯತ್ ಉದ್ಯೋಗಿಯಾಗಿದ್ದು, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದರು.

Leave a Comment

Your email address will not be published. Required fields are marked *