ಸಮಗ್ರ ನ್ಯೂಸ್: ರಾಷ್ಟ್ರೀಯ ಸೇವಾ ಯೋಜನಾ ಘಟಕದ ಚಟುವಟಿಕೆ ಕಾರ್ಯಕ್ರಮದ ಉದ್ಘಾಟನೆಯು ಸೆ.5 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟರಾಗಿದ್ದ ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ರವರು ರಾಷ್ಟ್ರೀಯ ಯೋಜನೆಯ ಮಹತ್ವ ಹಾಗೂ ವ್ಯಕ್ತಿತ್ವ ವಿಕಾಸನದ ಬಗ್ಗೆ ತಿಳಿಸಿಕೊಟ್ಟರು. ಈ ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ. ವಹಿಸಿದ್ದರು.
ವೇದಿಕೆಯಲ್ಲಿ ಐಕ್ಯೂಎಸಿ ಸಂಯೋಜಕಿ ಲತಾ ಬಿ.ಟಿ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಸುಮಿತ್ರ ಘಟಕದ ಸದಸ್ಯರುಗಳಾದ ನಿಶಾ ಗೌರಿ ಎಂ, ಯಕ್ಷ ಪಿ.ಎಸ್, ಜೀವನ್ ಎ, ಪ್ರದೀಪ್ ಸಿ .ವಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಆರತಿ ಸ್ವಾಗತಿಸಿ, ಜೀವಿತ್ ಕಾರ್ಯಕ್ರಮವನ್ನು ನಿರೂಪಿಸಿ , ನಿಶಾ ಗೌರಿ ಎಂ ವಂದಿಸಿದರು.