ಸಮಗ್ರ ನ್ಯೂಸ್: ರಸ್ತೆ ಅಪಘಾತದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ಸೆ. 5ರಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ.
ಮೃತ ಗಣೇಶ ದೇವಾಡಿಗ (27) ಹಳೆಯಂಗಡಿ ಇಂದಿರಾನಗರ ನಿವಾಸಿಯಾಗಿದ್ದು, ಅವರು ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ.
ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೆಟ್ ಬಳಿ ಸ್ಕೂಟರ್ ನಿಧಾನಿಸಿದಾಗ ಹಿಂದಿನಿಂದ ಬಂದ ವಾಹನ ಡಿಕ್ಕಿ ಹೊಡೆದು ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಿದ್ದು, ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.