ಸಮಗ್ರ ನ್ಯೂಸ್: ಮನೆಯೊಂದರ ಹಿಂಬದಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಸೆ.6 ರ ಮುಂಜಾನೆ ನಡೆದಿದೆ.
ತಾಲೂಕಿನ ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿ ಲಭಿಸಿತ್ತು. ಪೊಲೀಸರಿಗೆ ಮಾಹಿತಿ ರವಾನಿಸಿದ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಾಳಿ ಮಾಡಿರುವುದಾಗಿ ತಿಳಿದು ಬಂದಿದೆ.
ಸ್ಥಳದಲ್ಲಿ ಗೋವಧೆ ಮಾಡಲು ಬಳಸಿದ ಸಾಧನ, ದನದ ರುಂಡ, ಸುಮಾರು 70 ಕೆಜಿಯಷ್ಟು ಮಾಂಸ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬಿನೊಯ್ ಮತ್ತು ಕುಟ್ಟಪ್ಪನ್ ಎಂಬವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.