ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget ... ..

ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ್​ ನಾಡಿಗೇರ ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು.

Ad Widget

ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.

Leave a Comment

Your email address will not be published. Required fields are marked *