ಸಮಗ್ರ ನ್ಯೂಸ್: ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಯವ್ ಅವರು ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ.
ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಯನ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು. ರಾಜ್ಯದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ. ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.