ಸಮಗ್ರ ನ್ಯೂಸ್: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ CIDವಿಶೇಷ ತನಿಖಾ ತಂಡ (SIT)ವು ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2ನೇ ಆರೋಪಪಟ್ಟಿಯನ್ನು ಸಲ್ಲಿಸಿದೆ.
60 ವರ್ಷದ ಮನೆ ಕೆಲಸದಾಕೆ ಕೈ ಮುಗಿದು ಬೇಡಿಕೊಂಡರೂ ಬಿಡದೆ ಅತ್ಯಾಚಾರ ಎಸಗಿದ್ದಲ್ಲದೆ, ವೀಡಿಯೋ ಮಾಡಿಕೊಂಡಿರುವ ಬಗ್ಗೆ ಅದರಲ್ಲಿ ಉಲ್ಲೇಖೀಸಲಾಗಿದೆ.
ತನ್ನ ಮನೆಯಲ್ಲಿ ಕೆಲಸಕ್ಕಿದ್ದ ಸುಮಾರು 60 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ವೀಡಿಯೋ ಮಾಡಿಕೊಂಡಿದ್ದರ ಸಹಿತ ಪ್ರಜ್ವಲ್ ವಿರುದ್ಧ 1,652 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿದೆ. ಸಿಆರ್ಪಿಸಿ 164ರ ಅಡಿ ಸಂತ್ರಸ್ತೆ ಹಾಗೂ ಪ್ರಮುಖ ಸಾಕ್ಷಿದಾರರ ಹೇಳಿಕೆಯನ್ನು ದಾಖಲಿಸಲಾಗಿದೆ. 113 ಮಂದಿ ಸಾಕ್ಷಿದಾರರು ಹಾಗೂ ಡಿಜಿಟಲ್ ಸಾಕ್ಷ್ಯಾಧಾರ, FSL ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ ಎಂದು ಎಸ್ಐಟಿ ತಿಳಿಸಿದೆ.
ಹೊಳೆನರಸೀಪುರದಲ್ಲಿ ಮನೆ ಕೆಲಸಕ್ಕೆ ಬರುತ್ತಿದ್ದ 60 ವರ್ಷದ ಸಂತ್ರಸ್ತೆಯನ್ನು ಆರೋಪಿ ಪ್ರಜ್ವಲ್ ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಕೃತ್ಯ ಎಸಗುವಾಗ ತನ್ನದೇ mobileನಲ್ಲಿ ವೀಡಿಯೋ ಮಾಡಿರುವುದು ಪತ್ತೆಯಾಗಿದೆ. ಸಂತ್ರಸ್ತೆ ಕೈ ಮುಗಿದು ಬಿಟ್ಟುಬಿಡುವಂತೆ ಕೋರಿದರೂ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ವೀಡಿಯೊ ವೈರಲ್ ಆದ ಬಳಿಕ ಮೇ 5ರಂದು ಎಸ್ಐಟಿಯು ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು.