ಬೆಂಗಳೂರಿನಲ್ಲಿ ಐವರು ನಕಲಿ GST ಅಧಿಕಾರಿಗಳನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: 1.5 ಕೋಟಿ ರೂ. ಹಣ ಪಡೆದಿದ್ದ ಕೇಂದ್ರದ ನಾಲ್ವರು GST ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಮೊಟ್ಟ ಮೊದಲ ಬಾರಿಗೆ ಬಂಧಿಸಿರುವಂತಹ ಘಟನೆ ನಡೆದಿದೆ. ಜಿಎಸ್ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್‌, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳು.

Ad Widget ... ..

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಉದ್ಯಮಿ ಕೇಶವ್ ದೂರು ನೀಡಿದ್ದರು. ದೂರು ಆಧರಿಸಿ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ ದಾಳಿ ರೂಪದಲ್ಲಿ ಕೃತ್ಯವೆಸಗಿದ್ದರು. GST & Ed ಅಧಿಕಾರಿಗಳು ಎಂದು ಆ.30 ರಂದು ಕಚೇರಿಗೆ ಎಂಟ್ರಿ ನೀಡಿದ್ದು 3 ಕೋಟಿ ನೀಡುವಂತೆ ಡಿಮ್ಯಾಂಡ್ ಮಾಡಿದ್ದರು. ನಂತರ ಕಾರಿನಲ್ಲಿ ನಗರದಾದ್ಯಂತ ಸುತ್ತಾಡಿಸಿದರು. 1.5 ಕೋಟಿ ಪಡೆದು ಎಸ್ಕೇಪ್ ಆಗಿದ್ದಾರೆ ಎಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಕೇಶವ್ ದೂರು ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *