5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸರ್ಕಾರದ ಸಿದ್ಧತೆ/ ಅಮಿತ್‌ ಶಾ ಹೇಳಿಕೆ

ಸಮಗ್ರ ನ್ಯೂಸ್‌: ಭಾರತದಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಮುಂದಿನ 5 ವರ್ಷಗಳಲ್ಲಿ 5,000 ಸೈಬರ್ ಕಮಾಂಡೋಗಳನ್ನು ನೇಮಿಸಿಕೊಳ್ಳಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಈ 5000 ಕಮಾಂಡೋಗಳಿಗೆ ಸೈಬರ್‌ ದಾಳಿಯನ್ನು ತಡೆಯುವುದರ ಬಗ್ಗೆ ತರಬೇತಿ ನೀಡಲಾಗುವುದು ಎಂದರು.

Ad Widget ... ..

‘ವಿಶ್ವದ ಶೇ.46 ರಷ್ಟು ಡಿಜಿಟಲ್ ವಹಿವಾಟುಗಳು ಭಾರತದಲ್ಲಿ ನಡೆಯುತ್ತಿವೆ. ಸೈಬರ್‌ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳದೇ ದೇಶದ ಪ್ರಗತಿ ಸಾಧ್ಯವಿಲ್ಲ. ಇದೊಂದು ರಾಷ್ಟ್ರೀಯ ಭದ್ರತೆಯ ಅವಿಭಾಜ್ಯ ಅಂಗವಾಗಿದೆ’ ಎಂದು ಹೇಳಿದರು.

Ad Widget

Leave a Comment

Your email address will not be published. Required fields are marked *