ಸಮಗ್ರ ನ್ಯೂಸ್: 2024ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಹುದ್ದೆಗೆ ನನ್ನನ್ನು ಬೆಂಬಲಿಸುವುದಾಗಿ ರಾಜಕೀಯ, ಮುಖಂಡರೊಬ್ಬರು ಭರವಸೆ ನೀಡಿದ್ದರು. ಆದರೆ, ನಾನು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ನಾಗುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ನಡೆದ ಘಟನೆಯೊಂದು ನನಗೆ ಈಗಲೂ ನೆನಪಿದೆ. ನಾನು ಯಾರನ್ನೂ ಹೆಸರಿಸಲ್ಲ, ಆದರೆ ವ್ಯಕ್ತಿ ಹೇಳಿದರು, ನೀವು ಪ್ರಧಾನಿಯಾಗಲು ಬಯಸಿದರೆ, ನಾವು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು, ಆದರೆ ನಾನು ಪ್ರಸ್ತಾಪವನ್ನು ನಿರಾಕರಿಸಿದೆ. ನನಗೆ ಅಂತಹ ಯಾವುದೇ ಮಹತ್ವಾಕಾಂಕ್ಷೆ ಇಲ್ಲ ಎಂದು ಹೇಳಿದ್ದಾರೆ. ಬಳಿಕ ನೀವು ನನ್ನನ್ನು ಏಕೆ ಬೆಂಬಲಿಸಬೇಕು? ನಾನು ನಿಮ್ಮ ಬೆಂಬಲವನ್ನು ಏಕೆ ಸ್ವೀಕರಿಸಬೇಕು? ಎಂದು ಕೇಳಿದೆ. ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ, ನಾನು ನನ್ನ ಸಂಘಟನೆಗೆ ನಿಷ್ಠನಾಗಿದ್ದೇನೆ. ಯಾವುದೇ ಹುದ್ದೆಗಾಗಿ ನನ್ನ ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲವೆಂದು ಗಡ್ಕರಿ ಸ್ಪಷ್ಟಪಡಿಸಿದ್ದಾರೆ.