ಮಂಗಳೂರು: ಮಸೀದಿ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಸಮಗ್ರ ನ್ಯೂಸ್: ಮಂಗಳೂರಿನ ಕಾಟಿಪಳ್ಳದ ಮಸೀದಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿರುವುದಾಗಿ ತಿಳಿದು ಬಂದಿದೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯಲ್ಲಿರುವ ಕಾಟಿಪಳ್ಳದ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಮಸೀದಿಯ ಮೇಲೆ ಕಿಡಿಗೇಡಿಗಳು ನಿನ್ನೆ ರಾತ್ರಿ 10.30ರ ಸುಮಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ.

Ad Widget

ಕಿಡಿಗೇಡಿಗಳ ಕಲ್ಲೆಸೆತದಿಂದ ಬದ್ರಿಯಾ ಮಸೀದಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಈ ಕೃತ್ಯವನ್ನು ಎರಡು ಬೈಕ್ ನಲ್ಲಿ ಬಂದ ನಾಲ್ವರು ಕಿಡಿಗೇಡಿಗಳು ಎಸಗಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ದೃಶ್ಯಾವಳಿ ಮಸೀದಿ ಬಳಿಯಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಮುಸ್ಲೀಂ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದಂತ ಪೊಲೀಸರು, ಪರಿಶೀಲಿಸಿ ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಸೀದಿ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Leave a Comment

Your email address will not be published. Required fields are marked *