ಬೆಂಗಳೂರು : ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಬೊಮ್ಮನಹಳ್ಳಿಯ ಸತೀಶ್ ರೆಡ್ಡಿ ಅವರ ನಿವಾಸದ ಬಳಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರಿಗೆ ತಡರಾತ್ರಿ 1.30ಕ್ಕೆ ನಾಲ್ವರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಅವರು ಭೇಟಿ ನೀಡಿದ್ದಾರೆ.