ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ..? ಚಂದ್ರಬಾಬು ನಾಯ್ಡು ಗಂಭೀರ ಆರೋಪ

ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇದೀಗ ಗಂಭೀರ ಆರೋಪ ಮಾಡಿದ್ದಾರೆ.

Ad Widget ... ..

ಬುಧವಾರ ನಡೆದ ಎನ್ ಡಿಎ ಪಕ್ಷದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆರೋಪವನ್ನು ಕಟುವಾಗಿ ತಳ್ಳಿಹಾಕಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷವು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅವುಗಳನ್ನು ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಕರೆದಿದೆ. ತಿರುಮಲ ದೇವಸ್ಥಾನದ ಪಾವಿತ್ರ್ಯತೆ ಮತ್ತು ಆಡಳಿತದ ಬಗ್ಗೆ ಈ ನಿಲುವು ಚರ್ಚೆಯನ್ನು ಹುಟ್ಟುಹಾಕಿದೆ. ಕಳೆದ 5 ವರ್ಷಗಳಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಸಿಎಂ ನಾಯ್ಡು ಹೇಳಿದ್ದಾರೆ.

Ad Widget

ಸಿಎಂ ನಾಯ್ಡು ಆರೋಪವನ್ನು ವೈಎಸ್ಆರ್ ಪಕ್ಷ ತಡೆದುಹಾಕಿದೆ. ರಾಜಕೀಯ ಲಾಭಕ್ಕಾಗಿ ಆರೋಪ ಮಾಡಿದ್ದಾರೆ. ದೇವಸ್ಥಾನದಲ್ಲಿ ಬಂದು ಪ್ರಮಾಣ ವಚನ ಸ್ವೀಕರಿಸಲು ನಾವು ಸಿದ್ಧರಿದ್ದೇವೆ ಎಂದು ರಾಜ್ಯ ಸಭಾ ಸಂಸದ ಸುಬ್ಬಾರೆಡ್ಡಿ ತಿರುಗೇಟು ನೀಡಿದ್ದಾರೆ.

Leave a Comment

Your email address will not be published. Required fields are marked *