ಸಮಗ್ರ ನ್ಯೂಸ್:ಕರ್ನಾಟಕದ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದ್ದು, ಎಲ್ಲಾ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಲಾಗಿದೆ.
ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ.ಮತ್ತೊಂದೆಡೆ ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ ಆ ದಿನ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಇರಲಿದೆ.ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆಯು ನೀಡಲಾಗುತ್ತದೆ.
ಕರ್ನಾಟಕ ರಾಜ್ಯದಲ್ಲಿ 2024ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಯಿತು.ಮೊದಲ ಅವಧಿಯು ಅಕ್ಟೋಬರ್ 2ರ ತನಕ ಇರಲಿದೆ. ಸೆಪ್ಟೆಂಬರ್ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್ 30ರ ತನಕ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಿಸಿ ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ.