ಸಮಗ್ರ ನ್ಯೂಸ್: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ತುಪ್ಪ ಖರೀದಿ ಬಗ್ಗೆ, ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ದೇವಾಲಯಗಳಿಗೆ ಕಚ್ಚಾ ವಸ್ತುಗಳ ಖರೀದಿ ಪ್ರಕ್ರಿಯೆಯ ಲೆಕ್ಕಪರಿಶೋಧನೆಗೆ ಅವರು ಆದೇಶಿಸಿದರು.
ʼನಾವು ಐಜಿಪಿ ಮತ್ತು ಅದಕ್ಕಿಂತ ಹೆಚ್ಚಿನ ಹುದ್ದೆಗಳ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುತ್ತಿದ್ದೇವೆ. ಎಸ್‌ಐಟಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುತ್ತದೆ ಮತ್ತು ಅಂತಹ ವಿಷಯಗಳು ಪುನರಾವರ್ತನೆಯಾಗದಂತೆ ನಾವು ಆ ವರದಿಯ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.