ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯನಾಶ ಆರೋಪವಿದ್ದ ಮೂವರಿಗೆ ಜಾಮೀನು ಮಂಜೂರು ಆಗಿದೆ. ಎ15 ಕಾರ್ತಿಕ್, ಎ16 ಕೇಶವಮೂರ್ತಿಗೆ , ಎ17 ನಿಖಿಲ್ ನಾಯಕ್ ಅವರಿಗೆ ಜಾಮೀನು ಮಂಜೂರು ಆಗಿದೆ 57ನೇ ಸಿಸಿಹೆಚ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ಕೇಶವಮೂರ್ತಿ ಅವರಿಗೆ ಜಾಮೀನು ಮಂಜೂರು ಮಾಡಿದೆ. ತುಮಕೂರು ಜೈಲಿನಲ್ಲಿ ಕೇಶವಮೂರ್ತಿ ಇದ್ದರು. ಕೊನೆ ನಂತರದ ಸಾಕ್ಷ್ಯ ನಾಶ ಆರೋಪ ಮಾತ್ರ ಇವರ ಮೇಲಿತ್ತು. ಈ ಜಾಮೀನು ಇತರೆ ಆರೋಪಿಗಳ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಕೋರ್ಟ್ ಗೆ ಹೇಳಿದೆ.
ಕೇಶವಮೂರ್ತಿ ಪರ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಕೊಲೆ ಬಳಿಕ ಶೆಡ್ಗೆ ತೆರಳಿ 5 ಲಕ್ಷ ರೂ. ಅಡ್ವಾನ್ಸ್ ಹಣ ಪಡೆದು ಕೇಶವಮೂರ್ತಿ ಪೊಲೀಸರ ಮುಂದೆ ಶರಣಾಗಿದ್ದರು ಎನ್ನಲಾಗಿದೆ.
ಪ್ರಕರಣದಲ್ಲಿ ಎ1, ಎ2 ಆಗಿರುವ ದರ್ಶನ್, ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.
ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈ ಶಂಕರ್ ಅವರು ಆದೇಶಿಸಿದ್ದಾರೆ. ಇತ್ತ ಎಸ್ ಪಿಪಿ ಆಕ್ಷೇಪಣೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಲಾಗಿದೆ.
ದರ್ಶನ್ ಅವರ ಪರ ವಕೀಲರು ಸೆ.21ರಂದು ಜಾಮೀನು ಕೋರಿ ನಗರದ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರು ಸೆ.23ಕ್ಕೆ ವಿಚಾರಣೆ ಮುಂದೂಡಿದ್ದರು.