ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ. 25 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆ. 26ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಸೆಪ್ಟೆಂಬರ್ 27 ಮತ್ತು 28 ರಂದು ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ. 25, 26ರಂದು ಒಳನಾಡಿನ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆ. 26ರಂದು ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಕಲಬುರಗಿ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸೆ. 28, 29ರಂದು ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.