Ad Widget .

ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ/ ಎರಡನೇ ಹಂತದಲ್ಲಿ ಶೇಕಡಾ 54 ರಷ್ಟು ಮತದಾನ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ ಮುಕ್ತಾಯವಾಗಿದ್ದು, ಸಂಜೆ 5 ಗಂಟೆಯವರೆಗೆ ಶೇಕಡಾ 54 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದ. 26 ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ 239 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಿಗಿ ಭದ್ರತೆಯ ನಡುವೆ 26 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ನಡೆದಿದೆ. ಜಮ್ಮು ಪ್ರದೇಶದ ಗುಲಾಬ್‌ಗಡ (ST) ಕ್ಷೇತ್ರದಲ್ಲಿ ಅತ್ಯಧಿಕ ಅಂದರೆ ಶೇಕಡಾ 65.57 ರಷ್ಟು ಮತದಾನವಾಗಿದೆ. ನಂತರ ಪೂಂಚ್ ಹವೇಲಿಯಲ್ಲಿ ಶೇ. 62.91 ರಷ್ಟು ಮತದಾನವಾಗಿದೆ. ಚುನಾವಣಾ ಆಯೋಗವು ಮತದಾರರ ಅನುಕೂಲಕ್ಕಾಗಿ 3,502 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಇವುಗಳಲ್ಲಿ 1,056 ನಗರ ಮತ್ತು 2,446 ಗ್ರಾಮೀಣ ಪ್ರದೇಶದಲ್ಲಿವೆ. ಮೊದಲ ಹಂತದಲ್ಲಿ ಶೇ.61.38ರಷ್ಟು ಮತದಾನವಾಗಿದೆ. ಮೂರನೇ ಹಂತ ಅಕ್ಟೋಬರ್ 1 ರಂದು ನಡೆಯಲಿದ್ದು. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *