ಸಮಗ್ರ ನ್ಯೂಸ್: ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆ ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ವಾಹನ ನಿಲುಗಡೆ ಸ್ಥಳದಲ್ಲಿ ನಡೆಸಲಾಯಿತು.
ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು. ಮೈಸೂರು ದಸರಾದ ಆಕರ್ಷಣೆಯ ವಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಇಂದು ಕುಶಾಲತೋವು ಅಭ್ಯಾಸವನ್ನು ನಡೆಸಲಾಯಿತು.
ಇಂದು ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ. ಇನ್ನು ಎರಡು ಬಾರಿ ಅಂದರೆ ಸೆ.29 ಹಾಗೂ ಅ. 1ರಂದು ಕುಶಾಲ ತೋವು ಅಭ್ಯಾಸವನ್ನು ನಡೆಸಲಾಗುವುದು. ಮೈಸೂರು ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿರುವ ಆನೆಗಳಿಗೆ ಸ್ವಾಗತವನ್ನು ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಮಾಡಲಾಯಿತು.