ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದ್ದು,ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹವರಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ನಿಲ್ಲಿಸಲಾಗಿದೆ.
ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ.
ಸೆ.30 ರ ಒಳಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಡಲಾಗಿದೆ.ಇ-ಕೆವೈಸಿ ಮಾಡಿಸದಿರುವವರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದೆ.
ಆದರೆ ಈಗ ನೀವು ನಿಮ್ಮ ಸ್ವಂತ ರಾಜ್ಯವನ್ನು ಹೊರತುಪಡಿಸಿ ಬೇರೆ ರಾಜ್ಯದಲ್ಲಿ ವಾಸಿಸುತ್ತಿದ್ದರೆ, ನೀವು E- KYC ಗಾಗಿ ನಿಮ್ಮ ರಾಜ್ಯಕ್ಕೆ ಹಿಂತಿರುಗುವ ಅಗತ್ಯವಿಲ್ಲ. ಬದಲಾಗಿ, ನಿಮ್ಮ ಪ್ರಸ್ತುತ ವಾಸಸ್ಥಳದಲ್ಲಿರುವ ಯಾವುದೇ ಸರ್ಕಾರಿ ಪಡಿತರ ಅಂಗಡಿಗೆ ನೀವು ಬೇಟಿ ನೀಡಬಹುದು.