ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಆರೋಪ| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಆದೇಶ ನೀಡಿದೆ.

Ad Widget ... ..

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶದ ಸ್ವರೂಪದಲ್ಲೇ ಕೋರ್ಟ್ ಸೀತಾರಾಮನ್ ಅವರ ವಿಚಾರದಲ್ಲೂ ಆದೇಶ ಕೊಟ್ಟಿದೆ.

Ad Widget

ಚುನಾವಣಾ ಬಾಂಡ್​​​ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. FIR ದಾಖಲಿಸಬೇಕು ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ತ್​ ನ ಆದರ್ಶ್ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು (PCR) ದಾಖಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಸಿರುವ ಕೋರ್ಟ್ FIR ದಾಖಲಿಸಿ ಎಂದು ಬೆಂಗಳೂರಿನ ತಿಲಕ್ ನಗರದ ಪೊಲೀಸರಿಗೆ ಆದೇಶ ಮಾಡಿದೆ. ಅಲ್ಲದೇ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಕೋರ್ಟ್​ ಮುಂದೂಡಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *