Ad Widget .

ಟೆಸ್ಟ್ ಕ್ರಿಕೆಟ್ ನ ಸ್ವರೂಪವನ್ನೇ ಬದಲಿಸಿದ ಟೀಂ ಇಂಡಿಯಾ| ಅತೀ ವೇಗದಲ್ಲಿ ಶತಕ ಬಾರಿಸಿ ದಾಖಲೆ

ಸಮಗ್ರ ನ್ಯೂಸ್: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಅತೀ ಕಡಿಮೆ ಓವರ್​ಗಳಲ್ಲಿ ಅರ್ಧಶತಕ ಹಾಗೂ ಶತಕಗಳನ್ನು ಪೂರೈಸುವ ಮೂಲಕ ಎಂಬುದು ವಿಶೇಷ. ಅಂದರೆ 147 ವರ್ಷಗಳ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 100 ರನ್ ಕಲೆಹಾಕಿದ ವಿಶ್ವ ದಾಖಲೆ ಇದೀಗ ಟೀಮ್ ಇಂಡಿಯಾ ಪಾಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕೇವಲ ಮೂರು ಓವರ್​ಗಳಲ್ಲಿ 50 ರನ್ ಕಲೆಹಾಕಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ್ದ ಇಂಗ್ಲೆಂಡ್ (4.2 ಓವರ್) ತಂಡದ ದಾಖಲೆಯನ್ನು ಮುರಿದರು.

Ad Widget . Ad Widget . Ad Widget .

ಅರ್ಧಶತಕದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (23) ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೂಡಿದ ಗಿಲ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಟೀಮ್ ಇಂಡಿಯಾ ಕೇವಲ 10.1 ಓವರ್​ಗಳಲ್ಲಿ 100 ರನ್ ಕಲೆಹಾಕಿ, ಟೆಸ್ಟ್​ನಲ್ಲಿ ಅತೀ ವೇಗವಾಗಿ ನೂರು ರನ್ ಪೂರೈಸಿದ ಹೊಸ ವಿಶ್ವ ದಾಖಲೆ ಬರೆಯಿತು.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಭಾರತ ತಂಡದ ಹೆಸರಿನಲ್ಲಿಯೇ ಇತ್ತು ಎಂಬುದು ವಿಶೇಷ. 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ 12.2 ಓವರ್​ಗಳಲ್ಲಿ ಶತಕ ಪೂರೈಸಿದ್ದರು. ಇದೀಗ ತನ್ನದೇ ದಾಖಲೆಯನ್ನು ಮುರಿದು 10.1 ಓವರ್​ಗಳಲ್ಲಿ ಭಾರತ ತಂಡವು ಹೊಸ ಇತಿಹಾಸ ನಿರ್ಮಿಸಿದೆ.

Leave a Comment

Your email address will not be published. Required fields are marked *