ಜಮೀನಿನಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವು..!

ಸಮಗ್ರ ನ್ಯೂಸ್:ದಾವಣಗೆರೆಯ ಜಗಳೂರಿನ ಅಸಗೋಡು ಗ್ರಾಮದಲ್ಲಿ ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ಧಾರೆ.

Ad Widget ... ..

ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ,ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *