Ad Widget .

5,8 ಹಾಗು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಸ್ತಾವ ಕುರಿತು ‘ಸುಪ್ರೀಂ’ ಅಸಮಾಧಾನ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಸ್ತಾವದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ಏನನ್ನೂ ಮಾಡದಂತೆ ಸೆ.30 ರಂದು ಎಚ್ಚರಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

8, 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಉಪ ನಿರ್ದೇಶಕರು ಸೆಪ್ಟೆಂಬರ್ 4 ಮತ್ತು 15ರಂದು ಜ್ಞಾಪನಾ ಪತ್ರಗಳನ್ನು ಹೊರಡಿಸಿದ್ದರು.

Ad Widget . Ad Widget . Ad Widget .

ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುವ ಯಾವುದನ್ನೂ ಮಾಡಬಾರದು. ಹೀಗಾದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ ಎಚ್ಚರಿಕೆ ನೀಡಿತು.

5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಈಗಾಗಲೇ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು.

5, 8 ಮತ್ತು 9ನೇ ತರಗತಿಗಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿಸಿ ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ 2024ರ ಮಾರ್ಚ್‌ನಲ್ಲಿ ರದ್ದುಪಡಿಸಿತ್ತು.

Leave a Comment

Your email address will not be published. Required fields are marked *