ಸಮಗ್ರ ನ್ಯೂಸ್: : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆಯಾಗಿದ್ದಾರೆ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಣೆ ಮಾಡಿದೆ.
ಪುತ್ತೂರಿನ ಸರ್ವೆಯ ಬೊಟ್ಯಾಡಿಯ ನಿವಾಸಿಯಾದ ಕಿಶೋರ್ ಕುಮಾರ್ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಿಶೋರ್ ಕುಮಾರ್ ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಈ ಬಾರಿ ವಿಧಾನ ಪರಿಷತ್ ಗೆ ನಡೆಯುವ ಉಪಚುನಾವಣೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿಯ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರನ್ನು ಹಿಂದಿಕ್ಕಿ ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ಉಪಚುನಾವಣೆ ನಡೆಯಲಿದೆ.